Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ: ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಲ್ಕಿ: ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 51ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು
ಅರ್ಚಕ ಗೋಪಾಲಕೃಷ್ಣ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು
ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಹಬ್ಬಗಳ ಆಚರಣೆಯು ಆಡಂಬರ ವಾಗದೆ ಸರಳವಾಗಿ ನಡೆದು ಸರ್ವ ವಿಘ್ನಗಳು ನಾಶವಾಗಿ ಲೋಕ ಕಲ್ಯಾಣವಾಗಲಿ ಎಂದರು 
ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಪಳ್ಳಿ,ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನಿಲ್ ಆಳ್ವ,ಮಾಜೀ ಅಧ್ಯಕ್ಷ ಚಂದ್ರಶೇಖರ ಸುವರ್ಣ,ಪದಾಧಿಕಾರಿಗಳಾದ ಜಯಾನಂದ ರಾವ್, ರಾಘವೇಂದ್ರ ಭಟ್, ಕೃಷ್ಣರಾಜ್, ಪುರುಷೋತ್ತಮ ರಾವ್ ಬಡಗುಹಿತ್ಲು, ಮತ್ತಿತರರು ಉಪಸ್ಥಿತರಿದ್ದರು