Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ದೇವಾಡಿಗ ನೇಮಕ

ಮೂಲ್ಕಿ : ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ದೇವಾಡಿಗ ಅವರನ್ನು ದ.ಕ ಜಿಲ್ಲೆ  201 ಮೂಡಬಿದಿರೆ   ವಿಧಾನಸಭಾ ಕ್ಷೇತ್ರದ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ  ಮಾಡಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ  ವಿನಯ್ ಕುಮಾರ್ ಸೊರಕೆ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಮಾರ್ಗದರ್ಶನದಂತೆ, ಮಾಜಿ ಸಚಿವ ಕೆ ಅಭಯ ಚಂದ್ರ ಜೈನ್ , ಕೆಪಿಸಿಸಿ  ಪ್ರಧಾನ ಕಾರ್ಯದರ್ಶಿ  ಮಿಥುನ್ .ಎಂ. ರೈ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ  ಡೆನಿಸ್  ಡಿಸಿಲ್ವಾ ಅವರ ಶಿಫಾರಸಿನಂತೆ ನೇಮಕ ನಡೆದಿದೆ.
ಕಳೆದ 20 ವರ್ಷಗಳಿಂದ ಕೆಮ್ರಾಲ್ ಗ್ರಾಮ ಪಂಚಾಯತ್ ಸದಸ್ಯರಾಗಿ, ಪಂಚಾಯತ್ ಉಪಾಧ್ಯಕ್ಷರಾಗಿ, ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿರುವ ಸುರೇಶ್ ದೇವಾಡಿಗ ಅವರು ಪಕ್ಷ ಸಂಘಟನೆಯ ಜೊತೆಗೆ ಊರಿನ ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಪಂಜ ಕೊಯಿಕುಡೆ ಗ್ರಾಮದ ಬಡವರ ಪರ ಕೆಲಸ ಮಾಡಿರುವ ಅವರನ್ನು ಪಕ್ಷ ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ.