Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ: ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದಲ್ಲಿ ದೇವಸ್ಥಾನದಲ್ಲಿ ಬಾಳೆಗಾರು ಮಠ ಶ್ರೀ ರಘುವಂಶ ತೀರ್ಥ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ನಡೆಯಿತು.
ಬೆಳಿಗ್ಗೆ ಕ್ಷೇತ್ರದ ಅರ್ಚಕರಾದ ವಾಸುದೇವ ಭಟ್ ನೇತೃತ್ವದಲ್ಲಿ  ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ನಡೆದು ವಿಶೇಷ ಹೋಮ ಹವನಗಳು ನಡೆಯಿತು ಬಳಿಕ ಸ್ವಾಮೀಜಿಯವರಿಂದ ತಪ್ತ ಮುದ್ರಾಧಾರಣೆ ನಡೆಯಿತು. ಈ ಸಂದರ್ಭ  ಕಟೀಲು ಕ್ಷೇತ್ರದ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ, ಪಾವಂಜೆ ಶಿವಳ್ಳಿ ಸ್ಪಂದನದ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು ,ರಾಜೇಶ್ ಖನ್ನ ಭಟ್ ಕೆರೆಕಾಡು,ಎಸ್ ಕೆ ಪಿ ಎ.ನ ಮೋಹನ್ ರಾವ್, ಹಾಗೂ ಭಕ್ತಾದಿಗಳು ಭಾರಿ ಸಂಖ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.