Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ:ರಸ್ತೆಯಲ್ಲಿ ಮಾರಣಾಂತಿಕ ಹೊಂಡ ಗುಂಡಿ-ಬಾಳೆ ಗಿಡ ನೆಟ್ಟು ಪ್ರತಿಭಟನೆ



ಮುಲ್ಕಿ:ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಹೆದ್ದಾರಿ ರಸ್ತೆಯಲ್ಲಿ ಮಾರಣಾಂತಿಕ  ಹೊಂಡಗಳಿಂದ ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ ಎಂದು ಸ್ಥಳೀಯ ಆಟೋ ಚಾಲಕರು ಹಾಗೂ ಗ್ರಾಮಸ್ಥರು ಸೇರಿ ಅಪಾಯಕಾರಿ ಹೊಂಡಕ್ಕೆ ಬಾಳಗಿಡ ನೆಟ್ಟು ಪ್ರತಿಭಟನೆ ನಡೆಸಿದ್ದಾರೆ 
ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಲೋಕೋಪಯೋಗಿ ಇಲಾಖೆಗೆ ಸೇರಿರುವ ಈ ರಸ್ತೆ ಕಳೆದ ಹಲವಾರು ವರ್ಷಗಳಿಂದ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ನಾ ದುರಸ್ತಿಯಲ್ಲಿದೆ.
ಕಿನ್ನಿಗೋಳಿ ಯಿಂದ ಮುಲ್ಕಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಈ ರಸ್ತೆ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಮೀನಮೇಷ ಎಣಿಸುತ್ತಿದೆ. ಪ್ರತಿ ಮಳೆಗಾಲದಲ್ಲಿ ಮುಲ್ಕಿ ವಿಜಯ ಸನ್ನಿಧಿ,ಕಾರ್ನಾಡ್,ಗೇರುಕಟ್ಟೆ,ಕುಬೆವೂರು,, ಕೆಂಚನಕೆರೆ ಅಂಗರಗುಡ್ಡೆ, ಕೆರೆಕಾಡು, ಹೊಸ ಕಾವೇರಿ, ಪದ್ಮನೂರು, ಬಲವಿನ ಗುಡ್ಡೆ,ಕಿನ್ನಿಗೋಳಿ ಬಳಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ  ಹೆದ್ದಾರೆ ಹೊಂಡಮಯವಾಗುತ್ತಿದ್ದರೂ ಇಲಾಖೆ ನಿದ್ರಾವಸ್ಥೆಯಲ್ಲಿದೆ. ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ 
ಆಟೋ ಚಾಲಕ ಶಕೀಲ್ ಮಾತನಾಡಿ ಹೆದ್ದಾರಿ ಹೊಂಡ ಮಯವಾಗಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ದಯವಿಟ್ಟು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.