Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ವಿಜೃಂಭಣೆಯ ಏಕಾಹ ಭಜನೆ

ಮುಲ್ಕಿ:ಶ್ರೀ ವೆಂಕಟರಮಣ ಭಜನಾ ಮಂಡಳಿಯ 22ನೇ ವಾರ್ಷಿಕೋತ್ಸವದ ಪ್ರಯುಕ್ತ  ಸೀಮೆಯ ಒಂಬತ್ತು ಮಾಗಣೆಯ ಒಳಲಂಕೆ
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ  ಶನಿವಾರದಂದು ಲೋಕಕಲ್ಯಾಣಕ್ಕಾಗಿ  ಶ್ರೀ ದೇವರ ಸನ್ನಿಧಿಯಲ್ಲಿ ಏಕಾಹ ಭಜನೆ ಕಾರ್ಯಕ್ರಮ ನಡೆಯಿತು
ಪ್ರಾತಃಕಾಲ 6-15ಕ್ಕೆ ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು
ದೀಪ ಪ್ರಜ್ವಲನೆ ಮೂಲಕ ಏಕಾಹ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 
ಬಳಿಕ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು
ಈ ಸಂದರ್ಭ  ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು, ಉಪಸ್ಥಿತರಿದ್ದರು
ಭಜನಾ ಕಾರ್ಯಕ್ರಮ ಭಾನುವಾರ ಬೆಳಗ್ಗೆ 6-15ರ ವರೆಗೆ ನಡೆಯಲಿದೆ