ಮುಲ್ಕಿ:ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾದಾಯಕ ಉಪನ್ಯಾಸ
ಮುಲ್ಕಿ:ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾದಾಯಕ ಉಪನ್ಯಾಸ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಮುಲ್ಕಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ನ ಕಾರ್ಯದರ್ಶಿ ಪುಷ್ಪರಾಜ್ ಚೌಟ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳು ಇಂದು ಮಾಡುವ ಸಣ್ಣ ಪ್ರಯತ್ನವೇ ನಾಳೆಯ ಯಶಸ್ಸಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ ಪರಿಶ್ರಮ, ಶಿಸ್ತು ಮತ್ತು ಉತ್ತಮ ಚಿಂತನೆಗಳ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಜೀವನವನ್ನು ಶಿಸ್ತುಬದ್ಧವಾಗಿ ರೂಪಿಸಿಕೊಂಡು ಯಶಸ್ಸಿನ ಹಾದಿಯಲ್ಲಿ ಸಾಗಬೇಕು. ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳು ಹಾಗೂ ಯಶಸ್ಸಿನ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಹರೀoದ್ರ ಸುವರ್ಣ, ಕಾರ್ಯದರ್ಶಿ ಬಾಲಚಂದ್ರ ಸನಿಲ್, ಆಡಳಿತಾಧಿಕಾರಿ ಮಂಜುಳಾ ಕೆ.ವಿ. ಹಾಗೂ ಪ್ರಾಂಶುಪಾಲ ಯತೀಶ್ ಅಮೀನ್ ಉಪಸ್ಥಿತರಿದ್ದರು.ಸಾವಿತ್ರಿ ಧನ್ಯವಾದವಿತ್ತರು.
ಪೃಥ್ವಿರಾಜ್ ಕಾರ್ಯಕ್ರಮ ನಿರೂಪಿಸಿದರು