ಮುಲ್ಕಿ: ಮಾನಂಪಾಡಿ ವೀರಭದ್ರ ದೇವಸ್ಥಾನ ಸಂಪರ್ಕ ರಸ್ತೆ ಅವ್ಯವಸ್ಥೆ
ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ನಿಂದ ಮಾನಂಪಾಡಿ ವೀರಭದ್ರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅವ್ಯವಸ್ಥೆಗಳ ಆಗರವಾಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ
ರಸ್ತೆಯಲ್ಲಿ ಪೈಪ್ಲೈನ್ ಅಳವಡಿಸಲು ರಸ್ತೆ ತುಂಡರಿಸಿದ್ದು ಬಳಿಕ ಸರಿಯಾದ ಕಾಮಗಾರಿ ನಡೆಸದೆ ರಸ್ತೆಯಲ್ಲಿ ಬೃಹದಾಕಾರದ ಹೊಂಡಗಳು ಉಂಟಾಗಿದೆ
ಬಳಿಕ ಈ ಭಾಗದಲ್ಲಿ ಅಮೃತ್ 2.0 ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಕೂಡ ನಡೆದಿದ್ದು ರಸ್ತೆ ಮತ್ತಷ್ಟು ಹದಗೆಡಲು ಕಾರಣವಾಗಿದೆ
ಈ ಭಾಗದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಹಾಳಾಗಲು ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ
ಕಾರ್ನಾಡ್ ನಿಂದ ವೆಂಕಟರಮಣ ದೇವಸ್ಥಾನ,ದರ್ಗಾ ಮಸೀದಿ, ಮೈಲೊಟ್ಟು, ಪಂಜಿನಡ್ಕ, ಫಲಿಮಾರು, ವಿಜಯ ಕಾಲೇಜು ಕಡೆಗೆ ಹೋಗಲು ವಿದ್ಯಾರ್ಥಿಗಳು ಸಹಿತ ಸಾರ್ವಜನಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದು ರಸ್ತೆ ಅವ್ಯವಸ್ಥೆಯಿಂದ ಜನ ಹಾಗೂ ಪ್ರಯಾಣಿಕರು ಸಂಬಂಧಪಟ್ಟ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಶರತ್ ಕಾರ್ನಾಡ್ ಮಾತನಾಡಿ ನಗರ ಪಂಚಾಯತ್ ಅಧಿಕಾರಿಗಳು ಕೂಡಲೇ ಎಚ್ಚೆತ್ತು ತಾತ್ಕಾಲಿಕ ನಲ್ಲಿ ರಸ್ತೆ ದುರಸ್ತಿ ಪಡಿಸಬೇಕು ಇಲ್ಲದಿದ್ದರೆ ಮುಲ್ಕಿ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.