ಪುನರೂರು: ತೋಕೂರು ಯುವಕ ಸಂಘದಿಂದ ಸಮವಸ್ತ್ರ ಕೊಡುಗೆ
ಮೂಲ್ಕಿ:ಕನ್ನಡ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಪುನರೂರು ಅನುದಾನಿತ ಭಾರತ ಮಾತಾ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಮನವಿಯ ಮೇರೆಗೆ ಆರ್ಥಿಕವಾಗಿ ಹಿಂದುಳಿದ ಪುನರೂರು ಅನುದಾನಿತ ಭಾರತ ಮಾತಾ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ತೋಕೂರು ಯುವಕ ಸಂಘ ಹಾಗೂ ಮಹಿಳಾ ಮಂಡಲದ ವತಿಯಿಂದ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯುವಕ ಸಂಘ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಹಾಗೂ ಶಾಲಾ ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು.