ಮಕ್ಕಳಿಗೆ ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ನೀಡುವ ಶಿಕ್ಷಣದಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಹಾಗೂ ಯಶಸ್ಸು ಸಾಧ್ಯ" – ಪ್ರೊ . ರಘುರಾಜ್ ಕದ್ರಿ
ಮೂಲ್ಕಿ:ಮಕ್ಕಳಿಗೆ ಮೌಲ್ಯಗಳನ್ನು ನೀಡುವ ಶಿಕ್ಷಣವು ಉತ್ತಮ ಸಮಾಜ ನಿರ್ಮಾಣಕ್ಕೆ ಪೂರಕವಾಗಿದ್ದು, ಜೀವನದಲ್ಲಿ ಯಶಸ್ಸು ಸಾಧಿಸಲು ಭದ್ರ ಅಡಿಪಾಯವಾಗುತ್ತದೆ ಎಂದು
ಪ್ರೊ. ರಘುರಾಜ್ ಕದ್ರಿ ಹೇಳಿದರು.ಅವರು ಜು. 4 ರಂದು ಮೂಲ್ಕಿಯ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆಯಲ್ಲಿ ನಡೆದ ಶಿಕ್ಷಕ-ರಕ್ಷಕ
ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿಗಳ ಶಿಸ್ತು, ವ್ಯಕ್ತಿತ್ವ ವಿಕಾಸ ಹಾಗೂ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಾಲೆ ಮತ್ತು ಪೋಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂದರು.
ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಮಹತ್ವವನ್ನು ವಿವರಿಸಿದರು.
ಶಾಲಾ ಸಂಚಾಲಕ ಹರೀಂದ್ರ ಸುವರ್ಣ, ಪ್ರಾಂಶುಪಾಲ ಯತೀಶ್ ಅಮೀನ್, ಆಡಳಿತಾಧಿಕಾರಿ ಶ್ರೀಮತಿ ಮಂಜುಳಾ ಕೆ. ವಿ. ಹಾಗೂ ಟ್ರಸ್ಟಿ ಶ್ರೀ ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಸಾವಿತ್ರಿ ಸ್ವಾಗತಿಸಿದರು.ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಕುಮಾರಿ ಶ್ರೇಯ ವಂದನಾರ್ಪಣೆ ಸಲ್ಲಿಸಿದರು.
ಶಿಕ್ಷಕ-ರಕ್ಷಕ ಸಭೆಯು ಪೋಷಕರು ಮತ್ತು ಶಿಕ್ಷಕರ ನಡುವಿನ ಉತ್ತಮ ಸಂವಹನ, ಪರಸ್ಪರ ಸಹಕಾರ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವೇದಿಕೆಯಾಗಿ ಯಶಸ್ವಿಯಾಯಿತು.