Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತೋಕೂರು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ವತಿಯಿಂದ" ಗೃಹ ಆರೋಗ್ಯ ಕಾರ್ಯಕ್ರಮ

ಮುಲ್ಕಿ:ಪಡುಪಣಂಬೂರು ಗ್ರಾಮ ಪಂಚಾಯತ್ ಹಾಗೂ ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ತೋಕೂರು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ವತಿಯಿಂದ" ಗೃಹ ಆರೋಗ್ಯ ಕಾರ್ಯಕ್ರಮ " ಶನಿವಾರ ತೋಕೂರು ಶ್ರೀ ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಗೌರವಾಧ್ಯಕ್ಷ ಗುರುರಾಜ ಎಸ್ ಪೂಜಾರಿ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯಕ್ಕೆ ಮಹತ್ವ ನೀಡಿ ಉಚಿತ ಚಿಕಿತ್ಸೆ ಮೂಲಕ ಗುಣಪಡಿಸಿ ಮಾನವೀಯತೆಯ ಮೌಲ್ಯಗಳನ್ನು ಅಳವಡಿಸಿಕೊಂಡಿರುವ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ ಎಂದರು 
ಕೆಮ್ರಾಲ್ ಆರೋಗ್ಯ ಸುರಕ್ಷಾ ಅಧಿಕಾರಿ ಮಾರ್ಗರೇಟ್ ಸುದರ್ಶಿನಿ ರವರು ಮಳೆಗಾಲದಲ್ಲಿ ಪರಿಸರ ಸ್ವಚ್ಛತೆ ಹಾಗೂ ಆರೋಗ್ಯಕ್ಕೆ ಗಮನ ನೀಡುವುದರ ಮೂಲಕ ಮಾರಕ ರೋಗಗಳನ್ನು ತಡೆಗಟ್ಟಬಹುದು ಎಂದರು
 ಮುಖ್ಯ ಅತಿಥಿಗಳಾಗಿ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಪಡುಪಣಂಬೂರು ಗ್ರಾಪಂ ಮಾಜೀ ಉಪಾಧ್ಯಕ್ಷ ಹೇಮನಾಥ ಅಮೀನ್  ಫೇಮಸ್ ಯೂತ್ ಕ್ಲಬ್ ನ ಸದಸ್ಯರಾದ ಶರೀಫ್  ಹಿಮಕರ್ , ಸಂಜೀವ ಹಾಗೂ ಮಹಿಳಾ ಮಂಡಲದ ಕಾರ್ಯದರ್ಶಿ  ಕುಸುಮ ಕೋಶಾಧಿಕಾರಿ ಇಂದಿರಾ, ಅರ್ಚನ, ಭೋಜ,ಶ್ರೀನಿವಾಸ್ ಮೆಡಿಕಲ್ ಕಾಲೇಜ್ ನ ವೈದ್ಯಾಧಿಕಾರಿ ನಿಷ್ಕಷ್ ಇಂಟರ್ನ್ ಹಾಗೂ ಆಶಾ ಕಾರ್ಯಕರ್ತೆಯರಾದ ಯಶೋಧ ,ಲತಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು 
 ಸುಮಾರು 50 ಕ್ಕೂ ಹೆಚ್ಚು ಮಂದಿ ಉಚಿತ ಶಿಬಿರದಲ್ಲಿ ಭಾಗವಹಿಸಿದ್ದರು