Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಎಕ್ಕಾರು:ರಾಜ್ಯ ಹೆದ್ದಾರಿಯಲ್ಲಿ ಆಪಾಯಕಾರಿ ಹೊಂಡಗಳು

ಬಜಪೆ :ಕಟೀಲು - ಬಜಪೆ ರಾಜ್ಯ ಹೆದ್ದಾರಿ 67 ರ ಎಕ್ಕಾರು ಬಳಿ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಉಂಟಾಗಿದ್ದು, ವಾಹನಗಳ ಸವಾರರಿಗೆ ಆಪಾಯಕಾರಿಯಾಗಿ ಪರಿಣಮಿಸುತ್ತಿದೆ. ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ರಸ್ತೆ ಮೇಲ್ಮೈ ಕಾಣದೆ, ವಾಹನ ಸವಾರರು ಅಪಾಯಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹೊಂಡ ತಪ್ಪಿಸಲು ಪ್ರಯತ್ನಿಸುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ರಾತ್ರಿ ವೇಳೆಯಲ್ಲಿ ಹೊಂಡಗಳು ಸರಿಯಾಗಿ ಗೋಚರಿಸದೆ ಕೆಲ ದ್ವಿಚಕ್ರ ವಾಹನಗಳ ಸವಾರರು ಬಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆಗಳು ನಡೆದಿವೆ.

ಕಟೀಲು - ಬಜಪೆ ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಹೆಚ್ಚಿರುವುದರಿಂದ ಯಾವುದೇ ಸಮಯದಲ್ಲಿ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಅಪಾಯಕಾರಿ ಹೊಂಡಗಳನ್ನು ಶಾಶ್ವತವಾಗಿ ಮುಚ್ಚಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.ಈ ಬಗ್ಗೆ 
ಅಧಿಕಾರಿಗಳು ಎಚ್ಚೆತ್ತುಕೊಂಡು ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.