Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...




ಬಜ್ಪೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ

ಬಜಪೆ:ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಬಜ್ಪೆ ಪೇಟೆ ಜಂಕ್ಷನ್‌ನಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ  ಹಾಗೂ  ಬಜ್ಪೆ ಪಟ್ಟಣ ಪಂಚಾಯತ್ ಕೌನ್ಸಿಲರ್ ಸಿರಾಜ್ ಬಜ್ಪೆ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಕ್ಕಾಗಿ ಸ್ವಾತಂತ್ರ್ಯವನ್ನು ತಂದುಕೊಡಲು ಹಿರಿಯರು ಮಾಡಿದ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ನಾವು ನಮ್ಮ ಸಮಾಜ ಹಾಗೂ ಊರಿನ ಅಭಿವೃದ್ಧಿಗಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಕ್ಕೆ ನಿಜವಾದ ಅರ್ಥ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ನಿಸಾರ್ ಕರಾವಳಿ, ಉಪಾಧ್ಯಕ್ಷ ಇಂಜಿನಿಯರ್ ಇಸ್ಮಾಯಿಲ್ ,ರವಿ ಪೂಜಾರಿ, ಉದ್ಯಮಿ ರೊನಾಲ್ಡ್ ಫೆರ್ನಾಂಡಿಸ್, ಗುತ್ತಿಗೆದಾರ ಸಿದ್ಧಿಕ್ , ದಲಿತ ಸಂಘದ ಮುಖಂಡ ಮಂಜಪ್ಪ ಪುತ್ರನ್, ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ  ವಸಂತ್ ,ರೋಟರಿ ಕ್ಲಬ್ ಬಜ್ಪೆ ಅಧ್ಯಕ್ಷ ಸುಮನಿ ,ದಲಿತ ಸಂಘದ ನಾಯಕಿ  ಶಾಂತ, ಮಹಿಳಾ ನಾಯಕಿ ವಿಜಯಗೋಪಾಲ್ ಸುವರ್ಣ, ಬಜ್ಪೆ ಪಟ್ಟಣ ಪಂಚಾಯತ್ ಕೌನ್ಸಿಲರ್ ಗಳಾದ ಆಯಿಷಾ, ಗುಲ್ಶನ್ ಬಾನು, ಮೈದಿನ್ ಜುಮ್ಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದರ್, ಉದ್ಯಮಿ ಫಯಾಜ್ ಅಹ್ಮದ್ ಸೇರಿದಂತೆ ಅನೇಕ ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.ವೇದಿಕೆಯ ಸದಸ್ಯ ಹಫೀಜ್ ಕೊಳಂಬೆ ಸ್ವಾಗತಿಸಿ ,ದನ್ಯವಾದವಿತ್ತರು.