ಬಜ್ಪೆ ಬಾಲಭವನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಬಜಪೆ:ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಿಕಂಬಳದಲ್ಲಿರುವ ಬಾಲಭವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬಜ್ಪೆ ಪಟ್ಟಣ ಪಂಚಾಯತ್ ಕೌನ್ಸಿಲರ್ ಸಿರಾಜ್ ಬಜ್ಪೆಧ್ವಜಾರೋಹಣ ನೆರವೇರಿಸಿ ಮಾತನಾಡಿ, “ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ತ್ಯಾಗ, ಬಲಿದಾನ ಮಾಡಿದ ಮಹನೀಯರ ಜೀವನ, ಹೋರಾಟ ಹಾಗೂ ಆದರ್ಶಗಳನ್ನು ನಮ್ಮ ಪುಟಾಣಿ ಮಕ್ಕಳಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ಹೋರಾಟಗಾರರು ಅಳವಡಿಸಿಕೊಂಡಿದ್ದ ತ್ಯಾಗ, ಸೇವೆ ಹಾಗೂ ದೇಶಪ್ರೇಮದ ತತ್ವ–ಸಿದ್ಧಾಂತಗಳನ್ನು ನಮ್ಮ ಮಕ್ಕಳಲ್ಲಿ ಬೆಳೆಸಬೇಕು. ಆಗ ಮಾತ್ರ ಭವಿಷ್ಯದಲ್ಲಿ ಸದೃಢ, ಶಾಂತಿಯುತ ಹಾಗೂ ಅಭಿವೃದ್ಧಿಶೀಲ ಭಾರತವನ್ನು ನಿರ್ಮಿಸಲು ಸಾಧ್ಯ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಜ್ಪೆ ಪಟ್ಟಣ ಪಂಚಾಯತ್ ಕೌನ್ಸಿಲರ್‌ಗಳಾದ ಆಯಿಷಾ ಹಾಗೂ ಗುಲ್ಶನ್ ಬಾನು, ಬಜ್ಪೆ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ನಿಸಾರ್ ಕರಾವಳಿ, ಗುತ್ತಿಗೆದಾರ ಅಬೂಬಕರ್ ಸಿದ್ದೀಕ್, ಊರಿನ ಹಿರಿಯರಾದ ವಸಂತಿ ಮೇಡಂ, ಅಂಗನವಾಡಿ ಶಿಕ್ಷಕಿ ಸುನಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.