ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25ರಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಯವರು ಸಾರ್ವತ್ರಿಕ ರಜೆ ಘೋಷಣೆ
ಮಂಗಳೂರು: ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25ರಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಯವರು ಸಾರ್ವತ್ರಿಕ ರಜೆ ಘೋಷಿಸಿದ್ದಾರೆ.
2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಂತೆ ಈದ್ ಮಿಲಾದ್ ಹಬ್ಬಕ್ಕೆ ಆಗಸ್ಟ್ 26ರಂದು ಇದ್ದು, ನಾಳೆ ಸಾರ್ವತ್ರಿಕ ರಜೆ ಎಂದು ಈಗಾಗಲೇ ಘೋಷಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಆಗಸ್ಟ್ 26ರ ಬದಲಾಗಿ ಆಗಸ್ಟ್ 25ರಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ರಜೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಆಗಸ್ಟ್ 26ರ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸಿ, ಆಗಸ್ಟ್ 25ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಆದೇಶಿಸಲಾಗಿದೆ. ಆದಾಗ್ಯೂ, ಈಗಾಗಲೇ ಪೂರ್ವನಿಗದಿಯಾಗಿರುವ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪರೀಕ್ಷೆಗಳಿಗೆ ಈ ರಜೆ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.