ಪತ್ರಕರ್ತನ ಮೇಲೆ ವೈದ್ಯನ ಹಲ್ಲೆ ಗೂಂಡಾ ವರ್ತನೆ,ದ.ಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡನೆ; ಕಠಿಣ ಕ್ರಮಕ್ಕೆಆಗ್ರಹ
ಮಂಗಳೂರು:ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶ್ರೀಕಾಂತ್ ಹೆಮ್ಮಾಡಿ ಮೇಲೆ ವೈದ್ಯರು ಹಲ್ಲೆ ನಡೆಸಿರುವ ಗೂಂಡಾಗಿರಿಯ ಪ್ರವೃತ್ತಿ ಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸುತ್ತದೆ ಮತ್ತು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತದೆ.
ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿ ಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ದೈಹಿಕ ಹಲ್ಲೆ ನಡೆಸಿರುವ ಪ್ರಕರಣದ ಬಗ್ಗೆ ಸಂಬಂಧ ಪಟ್ಟ ಇಲಾಖೆ ಗಂಭೀರವಾಗಿ ಪರಿಗಣಿಸಬೇಕಾಗಿದೆ ಮತ್ತು ಇಂತಹ ಘಟನೆ ರಾಜ್ಯದಲ್ಲಿ ಮರುಕಳಿಸದಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಈ
ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ದಕ್ಷಿಣ ಜಿಲ್ಲಾಧ್ಯಕ್ಷ ಪುಷ್ಪರಾಜ್. ಬಿ.ಎನ್ ಮತ್ತು
ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.