Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಹಳೆಯಂಗಡಿ: ಬಸ್ ನಿಲ್ದಾಣದ ದುರವಸ್ತೆ- ನಿದ್ರಾವಸ್ಥೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ!!



ಹಲಕೆಯಂಗಡಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿಯ ಬಸ್ ನಿಲ್ದಾಣ ಅವ್ಯವಸ್ಥೆಗಳ ಆಗರವಾಗಿದ್ದು ಸಂಬಂಧಪಟ್ಟ ಹೆದ್ದಾರಿ ಇಲಾಖೆ ಮೌನವಹಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಮಂಗಳೂರಿನಿಂದ  ಕಿನ್ನಿಗೋಳಿ  ಕಡೆಗೆ ಹೋಗುವ ಬಸ್ಸುಗಳು ನಿಲ್ಲುವ ಹಳೆಯಂಗಡಿ ಜಂಕ್ಷನ್ ಬಳಿಯ ಬಸ್ ತಂಗುದಾಣ ಬಿಕ್ಷುಕರ ಪುಂಡುಪೋಕರಿಗಳ ತಾಣವಾಗಿದೆ
ಬಸ್ ತಂಗುದಾಣದ ಎದುರು ಭಾಗದಲ್ಲಿ ತ್ಯಾಜ್ಯ ನೀರು ಹರಿಯುತ್ತಿದ್ದರೆ ಹಿಂಭಾಗದಲ್ಲಿ ಕಸ ಕೊಂಪೆ  ಹಾಗೂ ಬಯಲು ಶೌಚಾಲಯದ ತಾಣವಾಗಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುಸಜ್ಜಿತ ಬಸ್ ನಿಲ್ದಾಣ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಬಸ್ ತಂಗುದಾಣದಲ್ಲಿ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರಿಗೆ ಕುಳಿತುಕೊಳ್ಳಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ
ರಾಷ್ಟ್ರೀಯ ಹೆದ್ದಾರಿ ಹಳೆಯಂಗಡಿಯ ಮೂರು ಬಸ್ ನಿಲ್ದಾಣ ಕೂಡ ಅವ್ಯವಸ್ಥೆಗಳ ಕೇಂದ್ರ ಬಿಂದುವಾಗಿದೆ. ಒಳಚರಂಡಿ ಅವ್ಯವಸ್ಥೆಗಳಿಂದ ಸೊರಗಿ ಹೋಗಿರುವ  ಬಸ್ ನಿಲ್ದಾಣಗಳ ಸುತ್ತ ಬಹು ಮಹಡಿ ಕಟ್ಟಡಗಳ ತ್ಯಾಜ್ಯ ನೀರು ಹರಿಯುತ್ತಿದೆ. ಬಸ್ 
ತಂಗುದಾಣದ ಸುತ್ತ ಹುಲಸಾಗಿ ಬೆಳೆದಿರುವ ಪೊದೆಗಳು ಪ್ರಯಾಣಿಕರಿಗೆ ಭೀತಿ ಹುಟ್ಟಿಸುತ್ತಿದೆ. ಈ ಬಗ್ಗೆ ಅನೇಕ ಬಾರಿ ಹೆದ್ದಾರಿ ಇಲಾಖೆಗೆ ತಿಳಿಸಿದ್ದರೂ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಧರ್ಮಾನಂದ ಶೆಟ್ಟಿಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.