ಕಟೀಲಿನಲ್ಲಿ ವಿಜ್ಞಾನ ಮೇಳ
ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಮೂಹ ಶಿಕ್ಷಣ ಸಂಸ್ಥೆಗಳ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ಆಯೋಜಿಸಿದ ಕೋಡ್‌ಕ್ರಾಫ್ಟ್ ವಿಜ್ಞಾನ ಮೇಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ವಸ್ತು ತಯಾರಿಕಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ನಗದು ಬಹುಮಾನ, ಪದಕ ಹಾಗೂ ಪ್ರಮಾಣ ಪತ್ರವನ್ನು ನೀಡಿ ಅಭಿನಂದಿಸಿದರು.
ಕೃಷಿಗೆ ಸಂಬಂಧಿಸಿದಂತೆ ಶಕ್ತಿಯ ಉಳಿತಾಯಕ್ಕೆ ಸಂಬಂಧಿಸಿದಂತೆ
ದೈನಂದಿನ ಜೀವನವನ್ನು ಸುಗಮಗೊಳಿಸಲು ಹಲವಾರು ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ತಯಾರಿಸಿದ್ಧರು.
ನೀರಿನ ಪೂರೈಕೆ, ಪ್ಲಾಟ್ಫಾರ್ಮ್ ಗೇಟ್ ಓಪನಿಂಗ್, ತನ್ನಷ್ಟಕ್ಕೆ ಫ್ಯಾನ್ ತಿರುಗುವುದು ನಿಲ್ಲುವುದು, ಹೀಗೆ ವಿವಿಧ ಮಾದರಿಗಳನ್ನು ವಿದ್ಯಾರ್ಥಿಗಳು ತಯಾರಿಸಿದ್ದರು.
ಅತ್ಯುತ್ತಮ ಮಾದರಿಗಳಿಗೆ ಬಹುಮಾನ ನೀಡಲಾಯಿತು.
ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಪ್ರತಿನಿಧಿಗಳಾದ ಶ್ರೀವತ್ಸ, ಹೇಮಂತ್, ಕಟೀಲು ಸಮೂಹ ಶಿಕ್ಷಣ ಸಂಸ್ಥೆಗಳ ಸಂಯೋಜನಾಧಿಕಾರಿ ದಯಾನಂದ ಮಾಡ, ಉಪ ಪ್ರಾಚಾರ್ಯ ರಾಜಶೇಖರ ಎನ್., ಇಂಗ್ಲಿಷ್ ಮಾಧ್ಯಮ ಶಾಲೆಯ ಗಿರೀಶ್ ತಂತ್ರಿ, ಶ್ರೀಮತಿ ಕವಿತಾ, ಶ್ರೀಮತಿ ರಮ್ಯಾ ಸೇರಿದಂತೆ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯರು, ಸಮೂಹ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಉಪಸ್ಥಿತರಿದ್ದರು. ಹರೀಶ್ ಬಿ. ಸ್ವಾಗತಿಸಿದರು. ಕಿರಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು