Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...




ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ

ಕಿನ್ನಿಗೋಳಿ  :ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಹೋರಾಟ ಮತ್ತು ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳನ್ನು ಅನುಭವಿಸುವುದಲ್ಲ,ದೇಶದ ಏಕತೆ, ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿಗೆ ನಮ್ಮ ಕರ್ತವ್ಯವನ್ನು ನಿರ್ವಹಿಸುವುದೂ ಆಗಿದೆ.ದೇಶಕ್ಕಾಗಿ ಬಲಿದಾನಗೈದವರನ್ನು ನೆನಪಿಸಿ  ಅವರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ   ಅಧ್ಯಕ್ಷ ಗುರುರಾಜ್ ಮಲ್ಲಿಗೆಯಂಗಡಿ ಹೇಳಿದರು. ಅವರು ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ, ಸ್ವಾತಂತ್ರೋತ್ಸವದ ಪ್ರಯುಕ್ತ ಧ್ವಜಾರೋಹನಗೈದು ಮಾತನಾಡಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಅಗತ್ಯವಾಗಿ ಕಾರ್ಯರೂಪಕ್ಕೆ ಬರಬೇಕು, ಈ ಮೂಲಕ ಸ್ವಚ್ಚ ಭಾರತದ ಕಲ್ಪನೆ ಸಾಕಾರಗೊಳ್ಳಬೇಕು ಎಂದರು.

 ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಅನ್ಯ ಆಚಾರ್ಯ, ಕಿನ್ನಿಗೋಳಿ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿ ಅಥ್ಲೆಟಿಕ್ ಕ್ರೀಡಾ ಪಟು ಜ್ಯೋತಿ,  ಜೇನು ಕೃಷಿಯಲ್ಲಿ ಸಾಧನೆ ಮಾಡಿ ರಾಷ್ತ್ರ ಮಟ್ಟದ ತರಬೇತಿಯಲ್ಲಿ ಭಾಗವಹಿಸಿದ ಪ್ರಜ್ವಲ್ ಶೆಟ್ಟಿಗಾರ್ ಅವರನ್ನು ಈ ಸಂದರ್ಭ  ಸನ್ಮಾನಿಸಲಾಯಿತು. ಜನನಿ ಸೇವಾ ಸಂಸ್ಥೆ ಕಿನ್ನಿಗೋಳಿ ಇವರಿಗೆ ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರಶಂಸಾ ಪತ್ರ ನೀಡಲಾಯಿತು. ಈ ಸಂದರ್ಭ ಮುಖ್ಯಾಧಿಕಾರಿ ಜಯಶಂಕರ್ , ಉಪಾಧ್ಯಕ್ಷೆ ಪದ್ಮಲತಾ, ಪಟ್ಟಣ ಪಂಚಾಯತ್ ಸದಸ್ಯರು,  ಪಟ್ಟಣ ಪಂಚಾಯತ್ ಸಿಬಂಧಿಗಳು ಪೌರಕಾರ್ಮಿಕರು ಉಪಸ್ಥಿತರಿದ್ದರು.