Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ:ಆಗಸ್ಟ್ 16 ರಂದು ಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ- ಕಿಶೋರ್ ಪೂಜಾರಿ

ಮುಲ್ಕಿ: ಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಆಗಸ್ಟ್ 16 ಬೆಳಿಗ್ಗೆ 10 ಗಂಟೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಶ್ರೀ ಜಯಸಿ ಸುವರ್ಣ ಸಭಾಭವನದಲ್ಲಿ ನಡೆಯಲಿದೆ ಎಂದು ಎಂದುಸೌದಿ ಅರೇಬಿಯಾ ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ಕಿಶೋರ್ ಪೂಜಾರಿ ಹೇಳಿದ್ದಾರೆ ಅವರು ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಶ್ರೀ ಜಯಸಿ ಸುವರ್ಣ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
ಬೆಂಗಳೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ
ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಉಮಾನಾಥ ಕೋಟ್ಯಾನ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಸೂರ್ಯಕಾಂತ ಜಯ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಶ್ರೀ ಗೆಜ್ಜೆ ಗಿರಿ ಅಭಿವೃದ್ಧಿ ಕ್ಷೇತ್ರದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್, ಗೀತಾಂಜಲಿ ಸುವರ್ಣ ಉಡುಪಿ, ಉದ್ಯಮಿ ಸುಧಾಕರ ಎಂ ಪೂಜಾರಿ ಕಾರ್ಕಳ, ಸಿನಿಮಾ ನಟ ಪೃಥ್ವಿ ಅಂಬರ್, ಶೈಲೇಂದ್ರ ವೈ ಸುವರ್ಣ ಮತ್ತಿತರರು ಉಪಸ್ಥಿತರಿರುವರು ಎಂದರು 
ಅವರು ಮಾತನಾಡಿ ಸಂಘದ ಪ್ರಮುಖ ಉದ್ದೇಶಗಳಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡುವುದು ಒಂದಾಗಿದೆ.  ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಧ್ಯವಾದಷ್ಟು ನೆರವು ನೀಡುವುದು ನಮ್ಮ ನಿರಂತರ ಜವಾಬ್ದಾರಿಯೆಂದು ನಾವು ಭಾವಿಸುತ್ತೇವೆ.
ಇತ್ತೀಚಿನ ದಿನಗಳಲ್ಲಿ ಗಲ್ಫ್ ಪ್ರದೇಶದಲ್ಲಿ ಉಂಟಾಗಿರುವ ಯುದ್ಧ ಮತ್ತು ಪ್ರಾದೇಶಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಕೆಲವು ಅನಿಶ್ಚಿತತೆಗಳು ಮತ್ತು ಸವಾಲುಗಳು ಎದುರಾಗಿವೆ. ಇಂತಹ ಸಂದರ್ಭಗಳು ಸಹಜವಾಗಿಯೇ ಇಲ್ಲಿನ ನಮ್ಮ ಜೀವನ ಮತ್ತು ಕಾರ್ಯಚಟುವಟಿಕೆಗಳ ಮೇಲೂ ಕೆಲವು ರೀತಿಯಲ್ಲಿ ಪರಿಣಾಮ ಬೀರುತ್ತವೆ.
ಆದಾಗ್ಯೂ, ಯಾವುದೇ ಪರಿಸ್ಥಿತಿಯ ಪರಿಣಾಮ ನಮ್ಮ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಬೀಳಬಾರದು ಎಂಬುದು ನಮ್ಮ ದೃಢವಾದ ಆಶಯ. ಪ್ರತಿವರ್ಷ ನಮ್ಮ ಸಂಘವು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೈಗೊಳ್ಳುತ್ತಿರುವ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಈ ವರ್ಷವೂ ಮುಂದುವರಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ.
ಈ ವರ್ಷ 8ನೇ ತರಗತಿಯಿಂದ ಪದವಿ ಹಂತದವರೆಗೆ ವ್ಯಾಸಂಗ ಮಾಡುತ್ತಿರುವ ಒಟ್ಟು 127 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ನಮ್ಮ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ, ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಮತ್ತು ಶೈಕ್ಷಣಿಕ ಅಗತ್ಯತೆಗಳನ್ನು ಪರಿಗಣಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ಇದರ ಜೊತೆಗೆ, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ 90% ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ 11 ಪ್ರತಿಭಾವಂತ ವಿದ್ಯಾರ್ಥಿಗಳನ್ನು 'ಪ್ರತಿಭಾ ಪುರಸ್ಕಾರ'ಕ್ಕೆ ಆಯ್ಕೆ ಮಾಡಲಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಸಾಧನೆ ಮತ್ತು ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಈ ಪುರಸ್ಕಾರದ ಪ್ರಮುಖ ಉದ್ದೇಶವಾಗಿದೆ.
ಈ ಮೂಲಕ 127 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದರ ಜೊತೆಗೆ, 11 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರ ಸಾಧನೆಯನ್ನು ಗುರುತಿಸಲಾಗುತ್ತಿದೆ. ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ ಸೇರಿದಂತೆ ಈ ವರ್ಷದ ಕಾರ್ಯಕ್ರಮಕ್ಕಾಗಿ ಒಟ್ಟು ₹5.75 ಲಕ್ಷ ಮೊತ್ತವನ್ನು ವಿತರಿಸಲಾಗುತ್ತಿದೆ.
ನಮ್ಮ ದೃಷ್ಟಿಯಲ್ಲಿ ಇದು ಕೇವಲ ಆರ್ಥಿಕ ನೆರವು ನೀಡುವ ಕಾರ್ಯಕ್ರಮವಲ್ಲ. ಒಬ್ಬ ವಿದ್ಯಾರ್ಥಿಯ ಶಿಕ್ಷಣಕ್ಕೆ ನೀಡುವ ಸಣ್ಣ ನೆರವು ಕೂಡ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಅವರ ಭವಿಷ್ಯದ ಕನಸುಗಳನ್ನು ನನಸಾಗಿಸಲು ಪ್ರೇರಣೆಯಾಗಬಹುದು. ಆದ್ದರಿಂದ, ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಯಾವುದೇ ವಿದ್ಯಾರ್ಥಿಯ ಶಿಕ್ಷಣಕ್ಕೆ ಅಡಚಣೆ ಉಂಟಾಗಬಾರದು ಎಂಬುದು ನಮ್ಮ ಮುಖ್ಯ ಆಶಯ. ಎಂದರು
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸಂಘದ ಸ್ಥಾಪಕ ಅಧ್ಯಕ್ಷ ಸತೀಶ್ ಪೂಜಾರಿ, ಗೌರವಾಧ್ಯಕ್ಷ ಕೆ ಸಿ ಭಾಸ್ಕರ್,ಮಾಜೀ ಅಧ್ಯಕ್ಷ ಹೇಮರಾಜ್,ಉಪಾಧ್ಯಕ್ಷರಾದ ಸುಮಿತ್ರ ಭಾಸ್ಕರ್ ಕೊಲ್ಲೂರು, ಗಿರೀಶ್ ಪೂಜಾರಿ,ಕಾರ್ಯದರ್ಶಿ ಭಾಸ್ಕರ್  ಮತ್ತಿತರರು ಉಪಸ್ಥಿತರಿದ್ದರು