ಮುಲ್ಕಿ: ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರದ ಗೆಲ್ಲು ತೆರವು
ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಗೇರುಕಟ್ಟೆಯಿಂದ ಕೆಂಚನಕೆರೆ ವರೆಗಿನ ಕೆಲ ಅಪಾಯಕಾರಿ ಮರದ ಗೆಲ್ಲುಗಳನ್ನು ಗುರುವಾರ ಅರಣ್ಯ ಇಲಾಖೆಯ ವತಿಯಿಂದ ತೆರವುಗೊಳಿಸಲಾಯಿತು
ಕಳೆದ ದಿನಗಳ ಹಿಂದೆ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳ ತಾಲೂಕು ಮಟ್ಟದ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದ್ದರು
ಅದರಂತೆ ಮೂಡಬಿದ್ರೆ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು,ಮುಲ್ಕಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಗುರುವಾರ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ,ಕಿಲ್ಪಾಡಿ ಪಂಚಾಯತ್ ಕಚೇರಿ,ಕೆಂಚನಕೆರೆ ಬಳಿ ಬೀಳುವ ಸ್ಥಿತಿಯಲ್ಲಿರುವ ಅಪಾಯಕಾರಿ ಮರದ ಗೆಲ್ಲುಗಳನ್ನು ತೆರವುಗೊಳಿಸಿದ್ದಾರೆ
ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಮುಲ್ಕಿ ಮೆಸ್ಕಾಂ ಎಸ್ ಒ ಕೃಷ್ಣಪ್ಪ ಮತ್ತು ಸಿಬ್ಬಂದಿ ವರ್ಗ ಭಾಗಿಯಾಗಿದ್ದರು.