Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ:ಸನಾತನ ಮೌಲ್ಯ ಮುಂದಿನ ಪೀಳಿಗೆಗೆ ತಲುಪಿಸಿ::ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಧರ್ಮಸೇವೆಗೆ ಗೌರವ: ಪ್ರದ್ಯುಮ್ನ ರಾವ್ ಶಿಬರೂರುಗೆ ಸನ್ಮಾನ

ಮುಲ್ಕಿ: ಧಾರ್ಮಿಕ, ಸಾಮಾಜಿಕ ಹಾಗೂ ದೇವಾಲಯಗಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಪರಿಗಣಿಸಿ, ಶ್ರೀ ಕೊಡಮಣಿತ್ತಾಯ ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರದ್ಯುಮ್ನ ರಾವ್ ಶಿಬರೂರು ಅವರನ್ನು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಸನ್ಮಾನದ ಬಳಿಕ ಆಶೀರ್ವಚನ ನೀಡಿದ ಶ್ರೀಗಳು, “ದೇವಾಲಯಗಳು  ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಹಾಗೂ ಸನಾತನ ಧರ್ಮದ ಜೀವಂತ ಪ್ರತೀಕಗಳಾಗಿವೆ. ದೇವಾಲಯಗಳ ಜೀರ್ಣೋದ್ಧಾರ, ಧರ್ಮಪ್ರಚಾರ ಹಾಗೂ ಸಮಾಜಮುಖಿ ಸೇವೆಯಲ್ಲಿ ತೊಡಗಿರುವವರ ಕೊಡುಗೆ ಸಮಾಜಕ್ಕೆ ಅಮೂಲ್ಯವಾಗಿದೆ. ಇಂತಹ ಸೇವಾನಿರತ ವ್ಯಕ್ತಿಗಳನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಸೇವಾ ಮನೋಭಾವವನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದು ಹೇಳಿದರು.
ಧರ್ಮ, ಸಂಸ್ಕೃತಿ ಹಾಗೂ ಸೇವಾ ಮನೋಭಾವ ಒಂದಾದಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಸನಾತನ ಧರ್ಮದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶ್ರೀಗಳು ಕರೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಗಳು, ಶ್ರೀ ಕೊಡಮಣಿತ್ತಾಯ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ, ಧಾರ್ಮಿಕ ಕಾರ್ಯಕ್ರಮಗಳ ಸಂಘಟನೆ ಹಾಗೂ ದೇವಾಲಯದ ಅಭಿವೃದ್ಧಿಗೆ ಪ್ರದ್ಯುಮ್ನ ರಾವ್ ಶಿಬರೂರು ಅವರು ನೀಡಿರುವ ಕೊಡುಗೆಯನ್ನು ಪ್ರಶಂಸಿಸಿದರು.  ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಜನೋಪಯೋಗಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಸೇವಾ ಮನೋಭಾವವನ್ನು ಶ್ಲಾಘಿಸಿದರು
ಈ ಸಂದರ್ಭದಲ್ಲಿ ಸಮಾಜಸೇವಕ ಸುರೇಶ್ ಶೆಟ್ಟಿ ಸೂರಿಂಜೆ, ಸೇವಾಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ್, ಯುವ ಉದ್ಯಮಿ ರಾಹುಲ್ ಚಂದ್ರಶೇಖರ್, ಹರಿ ಪ್ರಸಾದ್ ಮಂಗಳೂರು,ನಿರ್ದೇಶಕ ರಾಘವ ಸೂರ್ಯ, ಕಾನೂನು ಸಲಹೆಗಾರರಾದ ರೋಶಿನಿ ರಾಘವ್ ಸೂರ್ಯ ಹಾಗೂ ಆಶ್ರಮದ ಸಂಚಾಲಕ ಪುನಿತ್ ಕೃಷ್ಣ ಉಪಸ್ಥಿತರಿದ್ದರು.