ಮುಲ್ಕಿ: ಮಹಿಳೆಯರು ಸ್ವಾವಲಂಬಿಗಳಾಗಿ-ಭಾನುಮತಿ ಶೆಟ್ಟಿ ಕಕ್ವಗುತ್ತು
ಮುಲ್ಕಿ: ಭ್ರಾಮರಿ ಗ್ರೂಪ್ ಹಾಗೂ ಮುಲ್ಕಿ ಅಕ್ಕ ಸಂಜೀವಿನಿ ಅಂಗಡಿ ಸಹಭಾಗಿತ್ವದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶ್ರೀ ಅನ್ನಪೂರ್ಣೇಶ್ವರಿ ಸಭಾಭವನದಲ್ಲಿ ಎರಡನೇ ಬಾರಿಗೆ ಸ್ವದೇಶಿ ಮೇಳವು ನಡೆಯಿತು.ಸ್ವದೇಶಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ
ತುಳು ವರ್ಲ್ಡ್ ಫೌಂಡೇಶನ್ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರು ಮಹಿಳೆಯರು ಸ್ವಾವಲಂಬಿಗಳಾಗಲು ಸ್ವದೇಶಿ ಮೇಳದಂತಹ ಕಾರ್ಯಕ್ರಮಗಳು ಪೂರಕ ಎಂದರು.
ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಮಹಿಳೆಯರಿಗೆ ಭಾರತ ದೇಶದಲ್ಲಿ ವಿಶೇಷ ಸ್ಥಾನಮಾನವಿದ್ದು ಸ್ವಉದ್ಯೋಗದ ಮೂಲಕ ಸಣ್ಣ ಕೈಗಾರಿಕೆಗಳು ಉದ್ದಿಮೆಗಳು ಬೆಳಗಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭ್ರಾಮರಿ
ಗ್ರೂಪ್ ನ ಪದಾಧಿಕಾರಿಗಳಾದ ಸುಜನಾ ಶೆಟ್ಟಿ, ರೇಖಾ ಶೆಟ್ಟಿ, ವಸಂತ್ ಕುಮಾರ್
ಮತ್ತಿತರರು ಉಪಸ್ಥಿತರಿದ್ದರು. ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನಗಳ ಕಾಲ ಸ್ವದೇಶಿ ಬೃಹತ್ ಮಾರಾಟ ಮೇಳ ನಡೆಯಲಿದೆ.