ಮುಲ್ಕಿ: ಕಾರಿಗೆ ಬೈಕ್ ಡಿಕ್ಕಿ - ಮುಲ್ಕಿ ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಸಮೀಪದ ಬಪ್ಪನಾಡು ಜಂಕ್ಷನ್ ಬಳಿ ಕಾರಿಗೆ ಬೈಕ್ ರಿಕ್ಕಿಯಾಗಿ ಬೈಕ್ ಸವಾರ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಬಸವರಾಜ್ (28) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ
ಉಡುಪಿ ಜಿಲ್ಲೆಯ ಫಲಿಮಾರು ಕಡೆಯಿಂದ ಹಳೆಯಂಗಡಿಗೆ ಹೋಗುತ್ತಿದ್ದ ಎಲೆಕ್ಟ್ರಿಕ್ ಕಾರು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ಜಂಕ್ಷನ್ ತಲುಪುತ್ತಿದ್ದಂತೆ ಏಕಾಏಕಿ ಬಪ್ಪನಾಡು ದೇವಸ್ಥಾನ ಕಡೆಯಿಂದ ಮುಲ್ಕಿ ಪೊಲೀಸ್ ಠಾಣೆ ಕಡೆಗೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿ ಬೈಕ್ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಬಸವರಾಜ್ ಎಂಬವರ ಕಾಲಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಗೊಂಡ ಬಳಿಕ ಸರ್ವಿಸ್ ರಸ್ತೆ ಕಾಮಗಾರಿ ವಿಳಂಬದಿಂದ ಮುಲ್ಕಿ,ಬಪ್ಪನಾಡು, ವಿಜಯ ಸನ್ನಿಧಿ ಜಂಕ್ಷನ್ ಬಳಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ಸರ್ವಿಸ್ ರಸ್ತೆ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ