Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಗಳ ಉದ್ಘಾಟನೆ

ಮುಲ್ಕಿ: ವಿದ್ಯಾರ್ಥಿಗಳು ಸೃಜನಶೀಲ ಪ್ರತಿಭೆಯನ್ನು ಬೆಳೆಸಲು ತಮ್ಮ ಶಿಕ್ಷಣವನ್ನು ಮೀಸಲಿಡಬೇಕು ಎಂದು
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಉದಯ ಕುಮಾರ್ ಇರ್ವತ್ತೂರು ಹೇಳಿದರು
ಅವರು ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಗಳ ಉದ್ಘಾಟಿಸಿ ಮಾತನಾಡಿ ಕಾಲೇಜಿನ ಶೈಕ್ಷಣಿಕ ಚಟುವಟಿಕೆ, ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಹಾಗೂ  ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಿಸ್ತು ಮತ್ತು ಕಲಿಕೆಯನ್ನು ಮನೆಯಿಂದಲೇ ಉತ್ತೇಜಿಸುವ ಸಲುವಾಗಿ ರೂಪಿಸಿದ 'ಮನೆಯೆ ಮೊದಲ ಪಾಠಶಾಲೆ' ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಲೇಜಿನ ಗ್ರಂಥಾಲಯಕ್ಕೆ ದೇಣಿಗೆಯಾಗಿ 50 ಪುಸ್ತಕಗಳನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆಯವರು ವಿದ್ಯಾರ್ಥಿ ಸಂಘದ ನಾಯಕ ಧನರಾಜ ಕೆ.ಎಸ್. ಹಾಗೂ ಕಾರ್ಯದರ್ಶಿ ವೈಷ್ಣವಿ ಭಂಡಾರಿಯವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಹಿರಿಯ ಉಪನ್ಯಾಸಕರಾದ ಡಾ. ರೇಖಾ ಬಿ.ಎಸ್. ಉಪನ್ಯಾಸಕ ವಿನೋದ ರಾಮಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು ವಿದ್ಯಾರ್ಥಿನಿ ಇಶಿಕಾ ಚೌದರಿ ಕಾರ್ಯಕ್ರಮ ನಿರೂಪಿಸಿದರು