Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬೆಥನಿ ಆಂಗ್ಲ ಮಾಧ್ಯಮ ಶಾಲೆ ಬಜಪೆ ವಿದ್ಯಾರ್ಥಿ ಅನಿಕೇತ್‌ಗೆ ಕರಾಟೆಯಲ್ಲಿ ಚಿನ್ನದ ಪದಕ

ಬಜ್ಪೆ: ಬೆಥನಿ  ಬಜ್ಪೆಯ ವಿದ್ಯಾರ್ಥಿ ಅನಿಕೇತ್ ಅವರು 2026–27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ–ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾರೆ.
ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 2ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆಯಲ್ಲಿ ನಡೆದ ಪಂದ್ಯಾಟದಲ್ಲಿ ಅನಿಕೇತ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ  ಅವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.