ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕ- ಬಾಲಕಿಯರ ಖೋಖೋ ಪಂದ್ಯಾಟ ,ಸರಕಾರಿ ಪ್ರೌಢಶಾಲೆ, ಬಡಗ ಎಕ್ಕಾರಿನ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ
ಬಜಪೆ:ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಹಾಗೂ ಮೇರಿ ವೇಲ್ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿ ಇದರ ಸಹಯೋಗದಲ್ಲಿ 2026- 27ನೇ ಸಾಲಿನ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋಖೋ ಪಂದ್ಯಾಟ ಜರಗಿತು .
ಸರಕಾರಿ ಪ್ರೌಢಶಾಲೆ, ಬಡಗ ಎಕ್ಕಾರು ಶಾಲೆಯ ಅಂಡರ್ 17 ಬಾಲಕಿಯರ ವಿಭಾಗ ಪ್ರಥಮ ಸ್ಥಾನ, ಬಾಲಕರ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಯಿತು.
ಬೆಸ್ಟ್ ರನ್ನರ್ ಪ್ರಶಸ್ತಿಯನ್ನು ಕೃತಿಕ ಮತ್ತು ಗೌತಮ್ ಪಡೆದುಕೊಂಡರು. ಶ್ರೀಮತಿ ವಿನ್ನಿ ನಿರ್ಮಲ ಡಿಸೋಜ ತಂಡ ವ್ಯವಸ್ಥಾಪಕರಾಗಿದ್ದು ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ವಿದ್ಯಾಲತ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು