Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಎಕ್ಕಾರಿನಲ್ಲಿ ಹೋಬಳಿ ಮಟ್ಟದ ಖೋ ಖೋ ಪಂದ್ಯಾಟ

ಬಜಪೆ:ದ.ಕ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಬಡಗ ಎಕ್ಕಾರಿನಲ್ಲಿ  ನಡೆದ  ಹೋಬಳಿ ಮಟ್ಟದ  ಖೋ ಖೋ ಪಂದ್ಯಾಟವನ್ನು ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷ  ಸಹಕಾರ ರತ್ನ ಮೋನಪ್ಪ ಶೆಟ್ಟಿ ಎಕ್ಕಾರು ಅವರು ಉದ್ಘಾಟಿಸಿದರು.ಖೋ ಖೋ ಪಂದ್ಯಾಟದಲ್ಲಿ 14 ತಂಡಗಳು ಭಾಗವಹಿಸಿದ್ದವು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಣ ಇಲಾಖೆಯಿಂದ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ವಿನೋದ,ಎಕ್ಕಾರು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸುದೀಪ್ ಅಮೀನ್ ,ಎಸ್.ಡಿ.ಎಂ.ಸಿ ಅಧ್ಯಕ್ಷೆ ಯಶವಂತಿ,ಸದಸ್ಯರುಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ಡಯಾನ ಫರಾವೋ ಸ್ವಾಗತಿಸಿದರು. ವೀಣಾ ಕಾರ್ಯಕ್ರಮ ನಿರೂಪಿಸಿದರು.ಚಂದ್ರಾವತಿ ವಂದಿಸಿದರು.