ಗುರುಪುರ:ಸ್ಕೂಟರ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆತ್ತಿಕಲ್ ಸಮೀಪದ ಪರಾರಿ ಎಂಬಲ್ಲಿ ಬುಧವಾರ ನಡೆದಿದೆ.ಇಸ್ಮಾಯಿಲ್ ಸ್ವರೂಪ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರು. ಈ ಬಗ್ಗೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ನಡೆಸುತ್ತಿದ್ದಾರೆ.