ಭಜನಾ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ಯುವಕ ಸಾವು
ಕಿನ್ನಿಗೋಳಿ : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶುಕ್ರವಾರ ತಡರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿಯನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್ (38) ಎಂದು ಗುರುತಿಸಲಾಗಿದೆ.
ಶ್ರೀನಾಥ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಸ್ಥಳೀಯ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.