ಮುಲ್ಕಿ: ಸೇವಾ ಸಂಸ್ಥೆಗಳು ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ- ಹರೀಂದ್ರ ಸುವರ್ಣ
ಮುಲ್ಕಿ: ಸಮಾಜ ಸೇವಾ ಕಾರ್ಯದೊಂದಿಗೆ , ವಿದ್ಯಾರ್ಥಿಗಳ ಭವಿಷ್ಯ ರೂಪಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಶಿಕ್ಷಕರನ್ನು ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ಹೇಳಿದರು.
ಅವರು ಮುಲ್ಕಿ ಯುವವಾಹಿನಿ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ವಿದ್ಯಾ ಸಂಸ್ಥೆಯಲ್ಲಿ ನಡೆದ ಶಿಕ್ಷಕರ ದಿನಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷೆ ವಿದ್ಯಾ ರಾಕೇಶ್ ಮಾತನಾಡಿದರು
ವೇದಿಕೆಯಲ್ಲಿ ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್, ಟ್ರಸ್ಟಿ ಯೋಗೀಶ್ ಕೋಟ್ಯಾನ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಮಟ್ಟು, ಆಡಳಿತಾಧಿಕಾರಿ ಮಂಜುಳಾ ಕೆ. ವಿ, ಪ್ರಾಂಶುಪಾಲ ಯತೀಶ್ ಅಮೀನ್, ಮುಖ್ಯೋಪಾಧ್ಯಾಯಿನಿ ಗೀತಾ ಶೆಟ್ಟಿ, ಘಟಕದ ಕಾರ್ಯದರ್ಶಿ ವೇದಾ ಜಯ ಕುಬೇವೂರು,ಮಾಜೀ ಅಧ್ಯಕ್ಷ ಸತೀಶ್ ಕಿಲ್ಪಾಡಿ ಹಾಗೂ ಜಯಕುಮಾರ್ ಕುಬೆವೂರು ಮತ್ತಿತರರು ಉಪಸ್ಥಿತರಿದ್ದರು ಪ್ರಾಂಶುಪಾಲರಾದ ಯತೀಶ್ ಅಮೀನ್ ಧನ್ಯವಾದ ಅರ್ಪಿಸಿದರು ಶಿಕ್ಷಕಿ ತೇಜಸ್ವಿನಿ ಕಾರ್ಯಕ್ರಮ ನಿರೂಪಿಸಿದರು