Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ: ಕಾರ್ನಾಡ್ ಬೈಪಾಸ್ ಬಳಿ ಕಾರು ಅಪಘಾತ-ಇಬ್ಬರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡ್ ಬೈಪಾಸ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಮಣಿಪಾಲದ ಆತ್ರಾಡಿ ನಿವಾಸಿ ಗೌರವ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಕಾರ್ನಾಡ್ ಬೈಪಾಸ್ ಬಳಿಯ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಸೀದಾ ಹೆದ್ದಾರಿ ಬದಿಯ ಮೂರು ಬ್ರೃಹದಾಕಾರದ ಮೈಲುಗಲ್ಲಿಗೆ ಡಿಕ್ಕಿ ಹೊಡೆದು ತಿರುಗಿ ನಿಂತಿದೆ 
ಅಪಘಾತದ ರಭಸಕ್ಕೆ ಕಾರಿಗೆ ಸಂಪೂರ್ಣ ಹಾನಿಯಾಗಿದ್ದು ಕಾರಿನಲ್ಲಿದ್ದ ಚಾಲಕ ಹಾಗೂ ಯುವತಿ ಪವಾಡ ಸದೃಶ ಪಾರಾಗಿದ್ದಾರೆ 
ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಯಿತು 
 ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಹಾಗೂ ಹೆದ್ದಾರಿ ಇಲಾಖೆಯ ಸಿಬ್ಬಂದಿ ಆಗಮಿಸಿ ಕ್ರೇನ್ ಮೂಲಕ ಕಾರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.