Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶಿಮಂತೂರು: ಶಿಕ್ಷಣದ ಜೊತೆಗೆ ಕ್ರೀಡೆಯ ಮೂಲಕ ಸಂಘಟಿತರಾಗಿ-ರವಿರಾಜ್ ಶೆಟ್ಟಿ ಜತ್ತಬೆಟ್ಟು

ಮುಲ್ಕಿ: ಪಂಜಿನಡ್ಕ  ಫ್ರೆಂಡ್ಸ್ ಮತ್ತು ಶಿಮಂತೂರು ಯುವಕ ಮಂಡಲ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಆವರಣದಲ್ಲಿ ನಡೆಯಿತು 
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಯಮಿ ರವಿರಾಜ್ ಶೆಟ್ಟಿ  ಜತ್ತಬೆಟ್ಟು ಮಾತನಾಡಿ  ಯುವ ಜನಾಂಗ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಜಾಗೃತರಾಗಿ, ಜೀವನದಲ್ಲಿ ಮಾನವೀಯ ಮೌಲ್ಯತೆಗಳ ಮೂಲಕ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಸಂಘಟಿತರಾಗಿ ರಾಷ್ಟ್ರಕ್ಕೆ ಮಾದರಿಯಾಗಿ ಎಂದರು
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಾಂತಾರಾಮ್ ಹೆಗ್ಡೆ ತೆಂಗಾಳಿ, ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷ ಮನೋಹರ ಕೋಟ್ಯಾನ್,ಶಿಮಂತೂರು ಹಾಲು ಉತ್ಪಾದಕರ ಸಂಘದ ಕಾರ್ಯ ನಿರ್ವಹಣಾಧಿಕಾರಿ ಮಮತಾ ಶೆಟ್ಟಿ, ಉದ್ಯಮಿ ನಿತಿನ್ ಕೆ ಶೆಟ್ಟಿ ಪಂಜಿನಡ್ಕ, ಯುವಕ ಮಂಡಲದ ಅಧ್ಯಕ್ಷ ದೀಪಕ್ ಮತ್ತಿತರರು ಉಪಸ್ಥಿತರಿದ್ದರು 
ಗೋಪಾಲ್ ಶಿಮಂತೂರು ಸ್ವಾಗತಿಸಿ ನಿರೂಪಿಸಿದರು 
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು