Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ: ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಸುವರ್ಣ ಆಯ್ಕೆ

ಮುಲ್ಕಿ:ಪ್ರತಿಷ್ಠಿತ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ 2026- 28 ನೇ ಸಾಲಿನ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಸುವರ್ಣ ಆಯ್ಕೆಯಾಗಿದ್ದಾರೆ.
 ಚಂದ್ರಶೇಖರ ಸುವರ್ಣ ರವರು ಬಪ್ಪನಾಡು ದೇವಸ್ಥಾನದ  ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ,ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ,ಮುಲ್ಕಿ ಯುವವಾಹಿನಿ ಘಟಕದ ಸ್ಥಾಪಕ ಅಧ್ಯಕ್ಷರಾಗಿ,ಯುವವಾಹಿನಿ ಕೇಂದ್ರೀಯ ಸಮಿತಿಯ ಮಾಜೀ ಅಧ್ಯಕ್ಷರಾಗಿ,ಮೂರ್ತೇದಾರ ಸೇವಾ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ 
ಬಿಲ್ಲವ ಸಮಾಜ ಸೇವಾ ಸಂಘದ ನೂತನ ಉಪಾಧ್ಯಕ್ಷರು ಗಳಾಗಿ ಸತೀಶ್ ಅಂಚನ್,ಇಂದಿರಾ ಸಿ ಅಮೀನ್ ಕೊಲ್ಲೂರು,
ಪ್ರಧಾನ ಕಾರ್ಯದರ್ಶಿಯಾಗಿ ಯತೀಶ್ ವಿ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಜಯಸಿ ಪೂಜಾರಿ ಮಾನಂಪಾಡಿ, ನರೇಂದ್ರ ಕೆರೆಕಾಡು, ಕೋಶಾಧಿಕಾರಿಯಾಗಿ ಹರೀoದ್ರ ಸುವರ್ಣ, ಜೊತೆ ಕೋಶಾಧಿಕಾರಿಯಾಗಿ ಸತೀಶ್ ಮಾನಂಪಾಡಿ, ಆಯ್ಕೆಯಾಗಿದ್ದಾರೆ. 
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ಶಾಸಕ ಉಮಾನಾಥ ಕೋಟ್ಯಾನ್,ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಬಪ್ಪನಾಡು ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಯದು ನಾರಾಯಣ ಶೆಟ್ಟಿ, ಪದಾಧಿಕಾರಿಗಳಾದ ಸುನಿಲ್ ಆಳ್ವ,ಅತುಲ್ ಕುಡ್ವ,ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್,ಮುಲ್ಕಿ ಬಿಲ್ಲವ ಸಂಘದ ಮಾಜೀ ಅಧ್ಯಕ್ಷರಾದ ಗೋಪಿನಾಥ ಪಡಂಗ, ಡಾ. ಹರಿಶ್ಚಂದ್ರ ಪಿ ಸಾಲ್ಯಾನ್,ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ಮುಲ್ಕಿ ವಿಜಯಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಉಮೇಶ್ ಮಾನಂಪಾಡಿ ,ಉದಯ ಕುಮಾರ್ ಶೆಟ್ಟಿ ಅಧಿಧನ್, ವಾಸು ಪೂಜಾರಿ ಚಿತ್ರಾಪು,ಶರತ್ ಕಾರ್ನಾಡ್, ಧರ್ಮಾನಂದ ಶೆಟ್ಟಿಗಾರ್ ಮತ್ತಿತರರು ಅಭಿನಂದನೆ ಸಲ್ಲಿಸಿದ್ದಾರೆ.