ಪೆರ್ಮುದೆ ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ,ಕಡತಗಳ ಪರಿಶೀಲನೆ
ಪೆರ್ಮುದೆ: ಪೆರ್ಮುದೆ ಗ್ರಾಮ ಪಂಚಾಯತ್ ಕಚೇರಿಗೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತಂಡ ಪಂಚಾಯತ್ ಕಚೇರಿಗೆ ಭೇಟಿ ನೀಡಿ ವಿವಿಧ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಿದೆ ಎಂದು ತಿಳಿದುಬಂದಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅವುಗಳಿಗೆ ಸಂಬಂಧಿಸಿದ ದಾಖಲೆಗಳ ಬಗ್ಗೆಯೂ ಪರಿಶೀಲನೆ ನಡೆಯುವ ಸಾಧ್ಯತೆ ಇದೆ.