ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್. ಕೋಡಿಯಲ್ಲಿ ಗುರು ಜಯಂತಿ ಆಚರಣೆ
ಕಿನ್ನಿಗೋಳಿ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ172ನೇ ಜನ್ಮ ದಿನಾಚರಣೆಯನ್ನು ಗುರುಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ವೇದಿಕೆ ಮತ್ತು ಯುವ ವೇದಿಕೆ, ಅಭಿವೃದ್ಧಿ ಸಮಿತಿ, ಹಾಗೂ ನೂತನ ಮಂದಿರ ನಿರ್ಮಾಣ ಸಮಿತಿಯ ಪದಾಧಿಕಾರಿಗಳು, ಮತ್ತು ಎಲ್ಲಾ ವಲಯಗಳ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ ನೆರವೇರಿತು.