ರೋಟರಿ ಆಂಗ್ಲ ಮಾಧ್ಯಮ ಶಾಲೆ ಕಿನ್ನಿಗೋಳಿ,ಶ್ರೀ ಶಾರದಾ ಮಾತೆಯ ಪೂಜೆ
ಕಿನ್ನಿಗೋಳಿ:
ರೋಟರಿ ಆಂಗ್ಲ ಮಾಧ್ಯಮ ಶಾಲೆ, ಕಿನ್ನಿಗೋಳಿಯಲ್ಲಿ ಶ್ರೀ ಶಾರದಾ ಮಾತೆಯ ಪೂಜೆಯನ್ನು ಅತ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶ್ರೀ ಶಾರದಾ ಮಾತೆಯ ಆಶೀರ್ವಾದವನ್ನು ಪಡೆದರು.