Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಿನ್ನಿಗೋಳಿ ಯುಗಪುರುಷ ಪ್ರಕಾಟನಾಲಯದ ದೀಪಾವಳಿ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ

ಮುಲ್ಕಿ: ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆಯಾದ ಕಿನ್ನಿಗೋಳಿ ಯುಗಪುರುಷ ಪ್ರಕಾಟನಾಲಯದ  ದೀಪಾವಳಿ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು
ಕ್ಷೇತ್ರದ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು 
ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು ಹಾಗೂ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ಯುಗಪುರುಷ ಪ್ರಕಾಟನಾಲಯದ  ದೀಪಾವಳಿ ವಿಶೇಷ ಸಂಚಿಕೆಯ ಬಿಡುಗಡೆಗೊಳಿಸಿ ಶುಭ ಹಾರೈಸಿದರು 
ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಕಾರ್ಯನಿರ್ವಾಣಾಧಿಕಾರಿ ಶ್ವೇತಾ ಪಳ್ಳಿ, 
ಅಕೌಂಟೆಂಟ್ ಶಿವಶಂಕರ್, ಡಾ. ಹರಿಶ್ಚಂದ್ರ  ಪಿ ಸಾಲ್ಯಾನ್, ವಾಸು ಪೂಜಾರಿ ಕೊಲಕಾಡಿ,ಸುಂದರ್ ಪುನರೂರು, ಸಾಧು ಅಂಚನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು
ಲೇಖಕ ಯುಗಪುರುಷ ಸಂಸ್ಥೆಯ ಭುವನಾಭಿರಾಮ ಉಡುಪ ಸ್ವಾಗತಿಸಿ ನಿರೂಪಿಸಿದರು