ಮುಲ್ಕಿ:ಶರನ್ನವರಾತ್ರಿ ಮಹೋತ್ಸವದಲ್ಲಿ ಮನಸೂರೆಗೊಂಡ ಆಹಾರ ಮೇಳ
ಮುಲ್ಕಿ: ಜಿಎಸ್ಬಿ ಸಭಾ ವತಿಯಿಂದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಎರಡನೇ ವರ್ಷದ ಆಹಾರ ಮೇಳ ಹಾಗೂ ಸ್ಪರ್ಧೆಗಳು ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು
ಪ್ರತಿಯೊಂದು ಕುಟುಂಬದ ಸದಸ್ಯರು ತಮ್ಮ ಮನೆಯಲ್ಲಿ ಸ್ವತಃ ಮಾಡಿದ ಆಹಾರಗಳನ್ನು ತಂದು ಸ್ಪರ್ಧೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು
ಬಳಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭ ಮುಲ್ಕಿ ಜಿಎಸ್ಬಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು
ಹೆಚ್ಚಾಗಿ ಮಹಿಳೆಯರೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.