ಪಚ್ಚನಾಡಿ ಮುಖ್ಯ ರಸ್ತೆ ಕಾಂಕ್ರೀಟೀಕರಣಕ್ಕೆ ₹3.33 ಕೋಟಿ ಅನುದಾನ – ಕಾಮಗಾರಿ ವೀಕ್ಷಿಸಿದ ಶಾಸಕ ಡಾ. ವೈ. ಭರತ್ ಶೆಟ್ಟಿ
ಮಂಗಳೂರು:ಪಚ್ಚನಾಡಿ ವಾರ್ಡ್‌ನ ಮುಖ್ಯ ರಸ್ತೆಯನ್ನು ಸಂಪೂರ್ಣ ಕಾಂಕ್ರೀಟೀಕರಣಗೊಳಿಸುವ ಉದ್ದೇಶದಿಂದ ಮಹಾತ್ಮ ಗಾಂಧಿ ಯೋಜನೆಯಡಿ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ಸಹಕಾರದಿಂದ ₹3 ಕೋಟಿ 33 ಲಕ್ಷ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ.
ಪ್ರಗತಿಯಲ್ಲಿರುವ ಕಾಮಗಾರಿಯನ್ನು ಶಾಸಕ ಡಾ.ಭರತ್ ಶೆಟ್ಟಿಯವರು ಇಂದು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿಯ ಗುಣಮಟ್ಟ ಮತ್ತು ವ್ಯವಸ್ಥಿತ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ನಿಕಟಪೂರ್ವ ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್, ವಾರ್ಡ್ ಅಧ್ಯಕ್ಷ ಭಾಸ್ಕರ್ ಕೆ., ಪ್ರಮುಖರಾದ ರವೀಂದ್ರ ನಾಯಕ್ ಕುಡುಪು, ವಿಜಯ್ ಅಮೀನ್, ಇಂದಿರಾ ಸುವರ್ಣ, ಬಾಲಕೃಷ್ಣ ಕುಕ್ಯಾನ್, ಉತ್ತಯ್ಯ, ಅನಿಲ್ ಪೂಜಾರಿ, ರತನ್ ಬಂದಲೆ, ಚಂದ್ರಹಾಸ ಕುಲಾಲ್, ಪ್ರಭಾಕರ್, ಧನುಷ್, ಉದಯ ಪೂಜಾರಿ ಸೇರಿದಂತೆ ಇತರ ಪ್ರಮುಖರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.