Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ

ಬಜಪೆ:ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಶಾಲಾ ಸ್ಥಳ ದಾನಿ ಹಾಗೂ ಕಟೀಲು  ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ  ನಿವೃತ  ಪ್ರಾಚಾರ್ಯ  ಉಮೇಶ್ ರಾವ್ ಎಕ್ಕಾರು ಇವರು ದೀಪ ಬೆಳಗಿಸಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಾಂಧಿ ಜಯಂತಿ ಅಂಗವಾಗಿ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶಾಲಾ ವಿಧೇಯಕಗಳಲ್ಲಿ ಒಂದಾದ ಪ್ಲಾಸ್ಟಿಕ್ ತ್ಯಾಜ್ಯ ನಿರ್ಮೂಲನೆ ಎಂಬ ಸಂಕಲ್ಪ  ಕೈಗೊಳ್ಳಲಾಯಿತು. ಅಪ್ಸಾನ ಹತ್ತನೇ ತರಗತಿ ಇವಳು ಮಹಾತ್ಮ ಗಾಂಧೀಜಿಯ ಬಗ್ಗೆ ಕುಮಾರಿ ರುತ್ ಮರಿಯಾ ಮಸ್ಕರೇನಸ್  ಲಾಲ್ ಬಹದ್ದೂರ್ ಶಾಸ್ತ್ರಿಗಳ ಜೀವನ ಚರಿತ್ರೆ ಹಾಗೂ ಆದರ್ಶಗಳ ಬಗ್ಗೆ ಕಿರು ಭಾಷಣವನ್ನು ಮಾಡಿದರು.ಕಾರ್ಯಕ್ರಮದಲ್ಲಿ ದೇಶ ಕಂಡ ಮಹಾನ್  ಚೇತನಗಳ ಮೌಲ್ಯಗಳನ್ನು ವಿಚಾರಧಾರೆಗಳನ್ನು ಬಿಂಬಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಸುದೀಪ್ ಅಮೀನ್  ವಹಿಸಿದ್ದರು.ವೇದಿಕೆಯಲ್ಲಿ ಎಸ್ ಡಿ ಎಂ ಸಿ ಸದಸ್ಯರಾದ  ಹೇಮಂತ್ , ಸುರೇಶ್   ಶ್ರೀಮತಿ ಮೋದಾಕ್ಷಿ ,ಶ್ರೀಮತಿ ಲತಾ ರಾವ್, ಶ್ರೀಮತಿ ಪ್ರಿಯಾ ,ಶ್ರೀಮತಿ ಮಂಜುಳಾ,ಶಾಲಾ ಮುಖ್ಯ ಶಿಕ್ಷಕಿ  ಶ್ರೀಮತಿ ಇಂದಿರಾ ಎನ್ ರಾವ್, ಶಿಕ್ಷಕರುಗಳು  ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು ಶ್ರೀಮತಿ ವಿನ್ನಿ ನಿರ್ಮಲ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.