ನ.29ರಂದು ಗೋವಾ ತುಳು ಕೂಟದ ವಾರ್ಷಿಕ ಉತ್ಸವ–2026; ಗೋವಾ ತುಳುವರಿಂದ ನಿತೇಶ್ ಶೆಟ್ಟಿ ಎಕ್ಕಾರ್ ಅವರಿಗೆ ‘ಸ್ವರ ರತ್ನ’ ಬಿರುದು ಪ್ರದಾನ
ಗೋವಾ: ತುಳು ಭಾಷೆ, ಸಂಸ್ಕೃತಿ, ಕಲೆ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ತುಳು ಕೂಟ (ರಿ.) ಗೋವಾ ಹಾಗೂ ತುಳುವ ಮಹಾಸಭಾ ಜಂಟಿ ಆಶ್ರಯದಲ್ಲಿ ವಾರ್ಷಿಕ ಉತ್ಸವ–2026 ನವೆಂಬರ್ 29ರ ಭಾನುವಾರದಂದು ಅದ್ದೂರಿಯಾಗಿ ನಡೆಯಲಿದೆ.
ಉತ್ಸವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು,ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಚಾರದೊಂದಿಗೆ ತುಳುನಾಡಿನ ಕಲಾವಿದರು ಹಾಗೂ ಸಾಧಕರನ್ನು ಗೌರವಿಸುವ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಗೋವಾ ತುಳುವರಿಂದ ಖ್ಯಾತ ನಿರೂಪಕ ನಿತೇಶ್ ಶೆಟ್ಟಿ ಎಕ್ಕಾರ್ ಅವರಿಗೆ ‘ಸ್ವರ ರತ್ನ’ ಬಿರುದು ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ತುಳುಕೂಟ ಗೋವಾದ ಅಧ್ಯಕ್ಷ ಗಣೇಶ್ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಉಮಾನಾಥ ಕೋಟ್ಯಾನ್ ,ಹರೀಶ್ ಪೂಂಜಾ,ಉದ್ಯಮಿ ಮಹೇಶ್ ಶೆಟ್ಟಿ ತೆಳ್ಳಾರು,ಸರ್ವೊತ್ತಮ ಶೆಟ್ಟಿ ಅಬುದಾಬಿ,ದೇವೇಂದ್ರ ಹೆಗ್ಡೆ ಕೊಕ್ರಾಡಿ,ಡಾ.ರಾಜೇಶ್ ಕೃಷ್ಣ ಆಳ್ವ,ಚಲನ ಚಿತ್ರ ನಟರಾದ ನವರಸ ನಾಯಕ ಬೋಜರಾಜ್ ವಾಮಂಜೂರು,ಪ್ರಸನ್ನ ಶೆಟ್ಟಿಬೈಲೂರು,ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಗೋವಾ ಬಂಟರ ಸಂಘದ ಅಧ್ಯಕ್ಷ ಶಶಿಧರ ರೈ,ಗೋವಾ ಬಿಲ್ಲವರ ಸಂಘದ ಅಧ್ಯಕ್ಷ ಕೃಷ್ಣ ಪೂಜಾರಿ,ಗೋವಾ ನಾರಾಯಣ ಗುರು ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪೂಜಾರಿ,ಗೋವಾ ತುಳು ಕೂಟದ ಸದಾನಂದ ಶೆಟ್ಟಿ ಬೆಳುವಾಯಿ,ಚಂದ್ರಹಾಸ ಅಮೀನ್ ,ವಿಜಯೇಂದ್ರ ಶೆಟ್ಟಿ ಕಬಿಯಾಡಿ ಹಾಗೂ ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2.30ರಿಂದ ರಾತ್ರಿ 9 ಗಂಟೆಯವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಹಾಸ್ಯ ಕಾರ್ಯಕ್ರಮ, ಗಾಯನ, ನೃತ್ಯ, ಕಾಮಿಡಿ ಶೋ ಹಾಗೂ ತುಳು ನಾಟಕ ಪ್ರದರ್ಶನ ನಡೆಯಲಿದೆ. ತುಳುನಾಡಿನ ಕಲಾವಿದರ ಮನರಂಜನಾ ಕಾರ್ಯಕ್ರಮಗಳು ಉತ್ಸವಕ್ಕೆ ಮೆರುಗು ನೀಡಲಿವೆ.
ಗೋವಾದಲ್ಲಿರುವ ತುಳುವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಾರ್ಷಿಕ ಉತ್ಸವವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ವಿನಂತಿಸಿದ್ದಾರೆ.