ರಾಜ್ಯ ಮಟ್ಟಕ್ಕೆ ಆಯ್ಕೆ
ಕಟೀಲು : ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೋಡಿಯಾಲ್ ಬೈಲ್, ಮಂಗಳೂರು ದ.ಕ ಹಾಗೂ ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಪುತ್ತೂರು ಇವರ ಸಹಯೋಗದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಕಟೀಲು ದುರ್ಗಾಪರಮೇಶ್ವರೀ ದೇವಳ ಪ್ರೌಢಶಾಲೆಯ ಮನೀಶ್ ಹಾಗೂ ಚಿನ್ಮಯ್ ಗುಂಪು ಸ್ಪರ್ಧೆಯಲ್ಲಿ ಹಾಗೂ ಸಮೃದ್ ಶೆಟ್ಟಿ ವೈಯಕ್ತಿ ವಿಭಾಗದಲ್ಲಿ ಬಹುಮಾನ ಪಡೆದು ಚಿತ್ರದುರ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.