Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ತುಪ್ಪೆಕಲ್ಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರಿಂದ ಚಾಲನೆ



ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಯಾರು ಮಹಾಶಕ್ತಿ ಕೇಂದ್ರದ ಅರ್ಕುಳ ಗ್ರಾಮ ಸಮಿತಿ ವ್ಯಾಪ್ತಿಯ ವಾರ್ಡ್ 267ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಿಗ್ಗೆ ತುಪ್ಪೆಕಲ್ಲಿನಲ್ಲಿ ನಡೆಯಿತು.

ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ಎತ್ತಿಹಿಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ಥಳೀಯ ಜನರ ಅಗತ್ಯಗಳಿಗೆ ಸ್ಪಂದಿಸಿ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸದಾನಂದ ಆಳ್ವ ಕಂಪ, ನೀರುಮಾರ್ಗ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಜಿತ್ ಶೆಟ್ಟಿ ಅಡ್ಯಾರ್, ಅಡ್ಯಾರ್–ಅರ್ಕುಳ ಶಕ್ತಿಕೇಂದ್ರದ ಪ್ರಭಾರಿ ಆಶ್ರಿತ್ ನೋಂಡ ಸೇರಿದಂತೆ ಪಕ್ಷದ ಜಿಲ್ಲಾ ಹಾಗೂ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳು, ಅರ್ಕುಳ ಗ್ರಾಮ ಸಮಿತಿ ಮತ್ತು ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.