ಮುಲ್ಕಿ: ಕೊಲ್ನಾಡು ಬಳಿ ಟೂರಿಸ್ಟ್ ಬಸ್ ಗೆ ಆಟೋ ಡಿಕ್ಕಿ -ಇಬ್ಬರು ಪವಾಡ ಸದೃಶ ಪಾರು
ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಕೋಲ್ನಾಡು ಬಸ್ ನಿಲ್ದಾಣದ ಬಳಿ ಏಕಾಏಕಿ ನಿಲ್ಲಿಸಿದ ಬಸ್ಸಿಗೆ ಹಿಂದಿನಿಂದ ಆಟೋ ಡಿಕ್ಕಿಯಾಗಿ ಆಟೋದಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ
ಗಾಯಾಳುಗಳನ್ನು ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿಗಳಾದ ಆಟೋ ಚಾಲಕ ಮಯ್ಯದ್ದಿ (60) ಮತ್ತು ಪ್ರಯಾಣಿಕ ಮುಸ್ತಾಫ ಎಂದು ಗುರುತಿಸಲಾಗಿದೆ
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸುಗಮ ಹೆಸರಿನ ಟೂರಿಸ್ಟ್ ಬಸ್ ಮುಲ್ಕಿ ಸಮೀಪದ ಕೋಲ್ನಾಡ್ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಅದರ ಚಾಲಕ ಎದುರು ಭಾಗದಲ್ಲಿ ನಿಲ್ಲಿಸಿದ್ದ ಬಸ್ಸನ್ನು ಓವರ್ ಟೇಕ್ ಮಾಡಿ ಬಲಬದಿಗೆ ಚಲಿಸುವ ಯತ್ನದಲ್ಲಿದ್ದಾಗ ಹಿಂದಿನಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಆಟೋ ಬಸ್ಸಿಗೆ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿ ಡಿವೈಡರ್ ನ ಕಬ್ಬಿಣದ ತಡೆಬೇಲಿಗೆ ಕೂಡ ಡಿಕ್ಕಿ ಹೊಡೆದು ನಿಂತಿದೆ.
ಅಪಘಾತದಿಂದ ಆಟೋ ರಿಕ್ಷಾದ ಎದುರು ಭಾಗ ಸಂಪೂರ್ಣ ಹಾನಿಯಾಗಿದ್ದು ಅದರಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕಗೆ ಗಾಯಗಳಾಗಿ ಮುಕ್ಕ ಆಸ್ಪತ್ರೆಗೆ ದಾಖಲಾಗಿದ್ದಾರೆ
ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಎರಡು ವಾಹನಗಳನ್ನು ಸ್ಥಳದಿಂದ ತೆರೆವುಗೊಳಿಸಿದ್ದಾರೆ.