ಕಾರ್ನಾಡ್ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ಶಿಬಿರದ ಉದ್ಘಾಟನೆ
ಮುಲ್ಕಿ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಭಾವನೆ ಬೆಳೆಯುವುದ್ದಲ್ಲದೇ ಶಿಸ್ತು, ಸರಳತೆ, ನಾಯಕತ್ವದ ಗುಣ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮಧುಕರ್ ಹೇಳಿದರು
ಅವರು ಚಿತ್ರಾಪು
ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ
ಕಾರ್ನಾಡ್ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ಶುಭ ಹಾರೈಸಿದರು.
ಪ್ರಾಂಶುಪಾಲರಾದ ಡಾ.ವಾಸುದೇವ ಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಚಿತ್ರಾಪು ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶ್ರೀಮತಿ ಶ್ರೀದೇವಿ, ಉಪಾಧ್ಯಕ್ಷರಾದ ವಾರಿಜ, ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ, ಜಾನೆಟ್ ರೋಡ್ರಿಗಸ್, ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಡೇವಿಡ್ ಧರ್ಮಪಾಲ್ ಉಪಸ್ಥಿತರಿದ್ದರು. ಶಿಬಿರಾಧಿಕಾರಿ. ಡಾ. ರೇಖಾ ಬಿ.ಎಸ್ ಸ್ವಾಗತಿಸಿ ಉಪನ್ಯಾಸಕಿ ಗಾಯತ್ರಿ ಎನ್ ಆರ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಮಾನಂದ ಕೆ. ಧನ್ಯವಾದ ಅರ್ಪಿಸಿದರು