Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಮಂಜುನಾಥ ಭಂಡಾರಿ ನೇಮಕ - ಕೆಪಿಸಿಸಿ ಸದಸ್ಯ ವಸಂತ್ ಬೆರ್ನಾಡ್ ಅಭಿನಂದನೆ

ಮುಲ್ಕಿ:ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ರವರನ್ನು ನೇಮಕಕ್ಕೆ
 ಕೆಪಿಸಿಸಿ ಸದಸ್ಯ ಹಾಗೂ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ವಸಂತ ಬೆರ್ನಾಡ್ ರವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಅವರು ಮಾಧ್ಯಮ ಜೊತೆ ಮಾತನಾಡಿ ರಾಜ್ಯದ ರಾಜಕೀಯ ಹಾಗೂ ಸಂಘಟನಾತ್ಮಕ ವಲಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಂಜುನಾಥ ಭಂಡಾರಿ ರವರಿಗೆ ಮಹತ್ವದ ಜವಾಬ್ದಾರಿ ನೀಡಿರುವುದು ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ರಾಜಕೀಯ ಅನುಭವಕ್ಕೆ ಸಂದ ಗೌರವವಾಗಿದೆ. ಅವರ ನೇಮಕದಿಂದ ವಿಧಾನಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ಬಲ ದೊರೆಯುವ ವಿಶ್ವಾಸವಿದೆ ಎಂದು ವಸಂತ್ ಬೆರ್ನಾಡ್ ಹೇಳಿದ್ದಾರೆ
ಮಂಜುನಾಥ ಭಂಡಾರಿ ಅವರು ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ, ಪಕ್ಷದ ಸಂಘಟನೆ ಹಾಗೂ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಲಿ ಎಂದು ವಸಂತ್ ಬೆರ್ನಾಡ್ ಶುಭ ಹಾರೈಸಿದ್ದಾರೆ