Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಮುಲ್ಕಿ:ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಟ್ರಸ್ಟ್ ನ ನೂತನ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ

ಮುಲ್ಕಿ: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಟ್ರಸ್ಟ್ ನ  ನೂತನ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಸಮಾರಂಭ
ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಯವರ ಶುಭಾಶೀರ್ವಾದದೊಂದಿಗೆ  ಮುಲ್ಕಿ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು
ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಮುಲ್ಕಿ ಮೂಡುಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಬಿಡುಗಡೆಗೊಳಿಸಿ ಮಾತನಾಡಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ವತಿಯಿಂದ ಅನೇಕ ಶೈಕ್ಷಣಿಕ ಹಾಗೂ ಸಾಮಾಜಿಕ ಸಹಾಯ ಹಸ್ತಗಳು ಹಾಗೂ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವುದು ಅಭಿನಂದನೀಯ ಎಂದರು 
ಈ ಸಂದರ್ಭ ಖ್ಯಾತ  ಜ್ಯೋತಿಷಿ ಉಷಾ ವಿಶ್ವನಾಥ ಭಟ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ನಾಯಕರಾದ ರಂಗನಾಥ ಶೆಟ್ಟಿ, ಶೈಲೇಶ್ ಕುಮಾರ್,ವಕೀಲರಾದ ರವೀಶ್ ಕಾಮತ್ ಬಸು ಕೆ ಎಸ ರಾವ್ ನಗರ, ಕಾಪು ತಾಲೂಕು ಪ್ರೆಸ್ ಕ್ಲಬ್ ಮಾಜೀ ಅಧ್ಯಕ್ಷ ಹರೀಶ್ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದರು 
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ಸಂಚಾಲಕರಾದ ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು  ಆಶ್ರಮದ ಸೇವಾ ಭಕ್ತರಾದ ಶರತ್ ಕಾರ್ನಾಡ್ ಧನ್ಯವಾದ ಅರ್ಪಿಸಿದರು