ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವದ ಪೂರ್ವಭಾವಿ ಚಪ್ಪರ ಮುಹೂರ್ತ
ಈ ಸಂದರ್ಭದಲ್ಲಿ ಟಿ.ಕೆ. ಮಧುಸೂದನ್ ಆಚಾರ್ ಅವರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆಯೊಂದಿಗೆ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್. ಪೂಜಾರಿ, ಸಮಿತಿಯ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಅಶೋಕ್ ಕುಂದರ್, ಶೋಭಾ ವಿ. ಅಂಚನ್, ದೇವಸ್ಥಾನದ ಅರ್ಚಕ ವೃಂದ, ಸಿಬ್ಬಂದಿ ವರ್ಗ, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.