ತೋಕೂರು:ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ತೋಕೂರು:ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರಿನಲ್ಲಿ ಡಿ. 09 ರಿಂದ 16 ರ ವರೆಗೆ ನಡೆಯಲಿರುವ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ನಡೆಯಿತು. ದೇವಳದ ಪ್ರಧಾನ ಅರ್ಚಕರಾದ ಟಿ. ಕೆ ಮಧುಸೂಧನ್ ಆಚಾರ್ ರವರು ದೇವರಲ್ಲಿ ಪ್ರಾರ್ಥಿಸಿ ಷಷ್ಟಿ ಮಹೋತ್ಸವ ನಿರ್ವಿಘ್ನವಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಪುಣ್ಯ ಕಾರ್ಯಕ್ಕೆ ಭಕ್ತರ ,ಗ್ರಾಮಸ್ಥರ, ಸಂಘ ಸಂಸ್ಥೆಗಳ ಸಹಕಾರ ಅಗತ್ಯ, ಪ್ರತಿದಿನ ಧಾರ್ಮಿಕ ಕಾರ್ಯಕ್ರಮ, ಅನ್ನ ಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ನಡೆಯಲಿದೆ ಎಂದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಜೆ. ಶೆಟ್ಟಿ ತೋಕೂರುಗುತ್ತು, ಅಶೋಕ್ ಕುಂದರ್, ವಿಶ್ವನಾಥ್, ಸವಿತಾ ಶರತ್ ಬೆಳ್ಳಾಯರು, ಶೋಭಾ ವಿ. ಅಂಚನ್, ಮದ್ದೇರಿ ದೈವಸ್ಥಾನದ ಅಧ್ಯಕ್ಷರಾದ ತೋಕೂರು ಗುತ್ತು ಹೊಸಮನೆ ಹರಿಪ್ರಸಾದ್ ಜಿ. ಶೆಟ್ಟಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಭಕ್ತರು ,ಗ್ರಾಮಸ್ಥರು, ಉಪಸ್ಥಿತರಿದ್ದರು.